ಗೋಡ್ಸೆಗಾಗಿ ಯೂಟ್ಯೂಬ್ ಚಾನೆಲ್‌ ಆರಂಭಿಸುತ್ತಿದೆ ಹಿಂದೂ ಮಹಾಸಭಾ!

godse
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ (06-10-2020): ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಹತ್ಯೆ ಮಾಡಿದ್ದ ನಾಥುರಾಂ ಗೋಡ್ಸೆ ಬಗ್ಗೆ ಯೂಟ್ಯೂಬ್ ಚಾನೆಲ್‌ ಆರಂಭಿಸಲು ಹಿಂದೂ ಮಹಾಸಭಾ ಮುಂದಾಗಿದೆ.

ಹಿಂದೂ ಮಹಾಸಭಾದ ವಕ್ತಾರ ಅಭಿಷೇಕ್ ಅಗರ್ವಾಲ್  ಈ ಕುರಿತು ಮಾಹಿತಿಯನ್ನು ನೀಡಿದ್ದು, ಸಾಮಾಜಿಕ ಜಾಲತಾಣದ ಮೂಲಕ ಗೋಡ್ಸೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಜಾತ್ಯಾತೀತ ಭಾರತದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿಯನ್ನು ಹತ್ಯೆ ಮಾಡಿದ್ದ ದೇಶದ್ರೋಹಿ ಗೋಡ್ಸೆ ಬಗ್ಗೆ ಯೂಟ್ಯೂಬ್ ಚಾನಲ್ ಆರಂಭಿಸಿರುವುದು ನಿಜಕ್ಕೂ ಪ್ರಜಾತಂತ್ರದ ಆಶಯಕ್ಕೆ ವಿರುದ್ಧವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್‌,ಈ ಟ್ರೆಂಡ್ ‌ನ್ನು ಯಾರು ಹುಟ್ಟುಹಾಕುತ್ತಿದ್ದಾರೆ ಎಂದು ನನಗೆ ಗೊತ್ತಿದೆ. ಗೋಡ್ಸೆಗಿಂತ ಗಾಂಧಿ ಕನಸಿನ ಭಾರತವೇ ಉಳಿದುಕೊಳ್ಳಲಿದೆ ಎಂದು ಹೇಳಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು