ನವದೆಹಲಿ(29-11-2020): ಆನ್ಲೈನ್ ಶಿಕ್ಷಣದ ದೃಷ್ಟಿಯಿಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ಒದಗಿಸುತ್ತಿದೆ ಎಂದು ಹೇಳುವ ಸಂದೇಶವು ವಾಟ್ಸಾಪ್ನಲ್ಲಿ ವೈರಲ್ ಆಗುತ್ತಿದೆ. ಆನ್ಲೈನ್ ತರಗತಿಗಳಿಗೆ ಹಾಜರಾಗಲು ಮತ್ತು ಪಠ್ಯಕ್ರಮವನ್ನು ಆನ್ ಲೈನ್ ಮೂಲಕ ಪೂರ್ಣಗೊಳಿಸಲು ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ಒದಗಿಸುತ್ತಿದೆ ಎಂದು ವೈರಲ್ ಪೋಸ್ಟ್ ಹೇಳಿದೆ.
COVID-19 ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಟ್ಟಾಗಿನಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೆಟ್ಟ ಪರಿಣಾಮ ಬೀರಿದೆ ಎಂದು ಸಂದೇಶವು ಪ್ರತಿಪಾದಿಸಿದೆ.
ಆದರೆ, ಸರ್ಕಾರ ಅಂತಹ ಯಾವುದೇ ಘೋಷಣೆ ಮಾಡಿಲ್ಲ ಮತ್ತು ವೈರಲ್ ಸಂದೇಶವು ನಕಲಿಯಾಗಿದೆ.
ಆನ್ಲೈನ್ ತರಗತಿಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ಒದಗಿಸುತ್ತಿದೆ ಎಂದು ವಾಟ್ಸಾಪ್ ಸಂದೇಶದಲ್ಲಿ ಹೇಳಲಾಗುತ್ತಿದೆ. ಈ ಸಂದೇಶ ನಕಲಿ. ಕೇಂದ್ರ ಸರ್ಕಾರ ಅಂತಹ ಯಾವುದೇ ಘೋಷಣೆ ಮಾಡಿಲ್ಲ. ಅಂತಹ ಯಾವುದೇ ನಕಲಿ ಲಿಂಕ್ ಅಥವಾ ವೆಬ್ಸೈಟ್ನಲ್ಲಿ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ಪಿಐಬಿ ಫ್ಯಾಕ್ಟ್-ಚೆಕ್ ತಂಡ ಟ್ವೀಟ್ ಮಾಡಿದೆ.