ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹಾವೇರಿ(03-10-2020): ಅಲೆಮಾರಿ ಜನಾಂಗದ ಜನರ ಆರ್ಥಿಕ ಅಭಿವೃದ್ಧಿಗೆ 2020-21ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮಹಿಳಾ ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಭೂ ಖರೀದಿ ಯೋಜನೆ ಹಾಗೂ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಸಾಲಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 55 ವರ್ಷದೊಳಗಿರಬೇಕು. ಗ್ರಾಮೀಣ ಪ್ರದೇಶದವರಿಗೆ ವಾರ್ಷಿಕ ಆದಾಯ ರೂ.98,000 ಮತ್ತು ನಗರ ಪ್ರದೇಶದವರ ಆದಾಯ ರೂ.1.20 ಲಕ್ಷದ ಒಳಗಿರಬೇಕು. ಅರ್ಜಿದಾರರು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್, ಚುನವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಆಸಕ್ತರು ಅರ್ಜಿ ನಮೂನೆಯನ್ನು ಹಾವೇರಿ ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅಕ್ಟೋಬರ್ 29 ರೊಳಗೆ ನಿಗಮದ ವೆಬ್‍ಸೈಟ್ www.dbcdc.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು