ಗದಗ (27-12-2020): ರಾಜ್ಯದ ಹಲವೆಡೆ ಗ್ರಾಮ ಪಂಚಾಯತ್ ಗೆ 2ನೇ ಹಂತದ ಮತದಾನ ನಡೆಯುತ್ತಿದ್ದು ಗದಗದಲ್ಲಿ ಜಿ.ಪಂ. ಸದಸ್ಯ ಶಿವಕುಮಾರ್ ನೀಲಗುಂದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಮೆಣಸಗಿ ಗ್ರಾಮದ ಮತಗಟ್ಟೆ ಸಂಖ್ಯೆ 105 ರಲ್ಲಿ ಜಿ.ಪಂ. ಸದಸ್ಯ ಶಿವಕುಮಾರ ನೀಲಗುಂದ ಮತ ಹಾಕಲು ಆಗಮಿಸಿದ್ದರು. ಈ ವೇಳೆ ಕಾಂಗ್ರೆಸನ ಹಿರೇಗೌಡ ಸಹೋದರರು ಹಲ್ಲೆ ನಡೆಸಿದ್ದಾರೆ.
ಈ ವೇಳೆ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದೆ. ಮತಗಟ್ಟೆ ಎದುರುಗಡೆ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಲಾಠೀ ಚಾರ್ಜ್ ಮಾಡಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಬಿಗಿ ಭದ್ರತೆ ವ್ಯವಸ್ಥೆ ಮಾಡಿದ್ದಾರೆ.