ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್: ಸಿಎಂ ಬಿ.ಎಸ್.ವೈ ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.

ಇಂದು ಸಿಎಂ ಯಡಿಯೂರಪ್ಪನವರು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯಿತಿ ಅಧ್ಯಕ್ಷರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಿದ್ದಾರೆ.

ಕೋವಿಡ್ 2ನೇ ಅಲೆ ಮೊದಲಿಗಿಂತ ವಿಭಿನ್ನವಾಗಿದೆ. ಹೆಚ್ಚು ಹಾನಿಕಾರಕವಾಗಿದೆ. ಕೊರೋನ ಸೊಂಕು ತ್ವರಿತವಾಗಿ ವ್ಯಾಪಿಸುತ್ತಿದ್ದು ತುರ್ತು ನಿವಾರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದೆ ಎಂದಿದ್ದಾರೆ. ಕಳೆದ ವಾರ ಸರ್ಕಾರ ಘೋಷಿಸಿದ ವಿಶೇಷ ಆರ್ಥಿಕ ಪ್ಯಾಕೇಜ್‍ನಲ್ಲಿ ಎಲ್ಲಾ ಗ್ರಾಮ ಪಂಚಾಯತ್‍ಗಳಿಗೂ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ ರೂ. 50ಸಾವಿರ ರೂಪಾಯಿಗಳನ್ನು ಬಿಡುಗಡೆ ಮಾಡಲು ಆದೇಶಿಸಿರುತ್ತೇನೆ. ಸದ್ಯದಲ್ಲಿಯೇ ಹಣ ತಮ್ಮ ಕೈ ಸೇರಲಿದೆ ಎಂದಿದ್ದಾರೆ.

ಹಳ್ಳಿಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳು ಹಾಗೂ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ. ಹಾಗೂ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗಳ ಮೇಲೆ ವಿಶೇಷ ಕಾಳಜಿವಹಿಸಬೇಕು ಹಾಗೂ ಸಂತೆ, ಜಾತ್ರೆ ಮತ್ತಿತರ ಕಾರ್ಯಕ್ರಮಗಳ ನಿಷೇಧವನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು