ಗ್ರಾಮ ಪಂಚಾಯತಿ ಚುನಾವಣೆ: ಅವಿರೋಧವಾಗಿ ಆಯ್ಕೆಗೊಂಡವರಿಗೆ ಶಾಕಿಂಗ್

ELECTION COMMISIION
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(18-12-2020): ಗ್ರಾಮ ಪಂಚಾಯತ್ ಗಳಿಗೆ ಸದಸ್ಯರ ಅವಿರೋಧ ಆಯ್ಕೆ ನಡೆದ ಕೆಲವೆಡೆ ಭಾರೀ ಅವ್ಯವಹಾರ, ಅಕ್ರಮ ನಡೆದಿರುವುದು ಚುನಾವಣಾ ಆಯೋಗದ ಗಮನಕ್ಕೆ ಬಂದಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಣಕ್ಕಾಗಿ ಅಭ್ಯರ್ಥಿಗಳನ್ನು ಹರಾಜು ನಡೆಸಿ, ಆಯ್ಕೆಯಾದರೆ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಚುನಾವಣಾ ಆಯೋಗ ಮುಂದಾಗಿದೆ.

 ರಾಜ್ಯ ಚುನಾವಣಾ ಆಯೋಗದ ಆಯುಕ್ತ  ಡಾ.ಬಿ.ಬಸವರಾಜು ಈ ಕುರಿತು ಮಾಹಿತಿಯನ್ನು ನೀಡಿದ್ದು, ಗ್ರಾಮ ಪಂಚಾಯ್ತಿ ಸ್ಥಾನಗಳನ್ನು ಬಹಿರಂಗವಾಗಿ ಹರಾಜು ಹಾಕುವುದು, ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.ಈ ರೀತಿಯ 8 ಪ್ರಕರಣ ಈಗಾಗಲೇ ದಾಖಲಾಗಿದೆ. ಇಂತಹವರ ವಿರುದ್ಧ ಕ್ರಮವನ್ನು ಕೈಗೊಳ್ಳಲಾಗುವುದು. ಅವಿರೋಧವಾಗಿ ಆಯ್ಕೆಗೊಂಡ ಸದಸ್ಯರನ್ನು ಅಕ್ರಮ ಕಂಡು ಬಂದಲ್ಲಿ ಅನರ್ಹಗೊಳಿಸಲಾಗುವುದು ಎಂದು ಹೇಳಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು