ಬೆಂಗಳೂರು(11-02-2021): ಗ್ರಾ. ಪಂಚಾಯತ್ ಸಭೆಗೆ ಕರೆದಿಲ್ಲ ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಆತನ ಬೆಂಬಲಿಗರು ಪಂಚಾಯತ್ ವಾಟರ್ ಮ್ಯಾನ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ಹೊಸಕೋಟೆ ತಾಲೂಕು ಬೈಲನರಸಾಪುರದಲ್ಲಿ ನಡೆದಿದೆ.
ವಾಟರ್ ಮ್ಯಾನ್ ಪಾಜೀಲ್ ಅಹ್ಮದ್ ಮತ್ತು ಆತನ ಸಹೋದರನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಲಾಗಿದೆ. ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳನ್ನು ಸಭೆಗೆ ಕರೆಯಲಿಲ್ಲ ಎಂದು ರೊಚ್ಚಿಗೆದ್ದು ಕೆಲವರು ಸಭೆಯಲ್ಲಿ ಗದ್ದಲ ಮಾಡಿದ್ದಾರೆ.
ಈ ವೇಳೆ ಪಿಡಿಒ ಗಲಾಟೆ ಮಾಡುವವರನ್ನು ಹೊರಗೆ ಕಳುಹಿಸಿದ್ದಾರೆ. ಇದಾದ ಬಳಿಕ ನೀರಿನ ಬಾಟಲ್ ತರಲೆಂದು ವಾಟರ್ ಮ್ಯಾನ್ ಪಂಚಾಯತಿ ಕಚೇರಿಯಿಂದ ಹೊರಗೆ ಹೋದಾಗ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ಅಡ್ಡ ಬಂದ ವಾಟರ್ ಮ್ಯಾನ್ ಸಹೋದರನ ಮೇಲೂ ಹಲ್ಲೆ ನಡೆಸಲಾಗಿದೆ.