ಹಳಿ ತಪ್ಪಿದ ಗುಹಾವಟಿ ಎಕ್ಸ್‌ಪ್ರೆಸ್‌ ರೈಲು: ಮೃತರ ಸಂಖ್ಯೆ 9ಕ್ಕೆ ಏರಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಜಲಪೈಗುರಿ (ಬಂಗಾಳ): ಗುವಾಹತಿಗೆ ಹೊರಟಿದ್ದ ಬಿಕನೇರ್ ಎಕ್ಸ್‌ಪ್ರೆಸ್ ರೈಲು ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯಲ್ಲಿ ಹಳಿ ತಪ್ಪಿ ಸಂಭವಿಸಿದ ದುರಂತದಲ್ಲಿ 9 ಪ್ರಯಾಣಿಕರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.


ಉತ್ತರ ಬಂಗಾಳದಲ್ಲಿ ನಿನ್ನೆ ಸಂಭವಿಸಿದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿದೆ ಹಾಗೂ 36 ಜನರು ಆಸ್ಪತ್ರೆಗಳಲ್ಲಿದ್ದಾರೆ. ಹಳಿ ತಪ್ಪಿದ ಬೋಗಿಗಳಲ್ಲಿ ಹೆಚ್ಚಿನ ಪ್ರಯಾಣಿಕರು ಸಿಕ್ಕಿಹಾಕಿಕೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಇಂದು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

“ಅಪಘಾತ ಸಂಭವಿಸಿದ ಸ್ಥಳದ ಕಡೆಗೆ ಹೋಗುತ್ತಿದ್ದೇನೆ” ಎಂದು ವೈಷ್ಣವ್ ಅವರು ಕಳೆದ ರಾತ್ರಿ ಟ್ವೀಟ್ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು