2022 ಗುಜರಾತ್ ವಿಧಾನಸಭಾ ಚುನಾವಣೆ: ಎಲ್ಲಾ ಕ್ಷೇತ್ರದಲ್ಲಿ ‘ಆಪ್’ ಸ್ಪರ್ಧೆ: ಅರವಿಂದ್ ಕೇಜ್ರಿವಾಲ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಅಹಮದಾಬಾದ್ : 2022ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ ಎಂದು ಆಪ್ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಸತತ ಮೂರನೇ ಭಾರಿ ಅಧಿಕಾರದ ಗದ್ದುಗೆ ಹಿಡಿದಿರುವ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ, ದೆಹಲಿ ಹೊರತಾಗಿ ಪಂಜಾಬ್​ ರಾಜ್ಯದಲ್ಲಿ ತಮ್ಮ ಪಕ್ಷ ಗಟ್ಟಿ ನೆಲೆಯೂರಿದೆ. ಇದೀಗ 2022ರಲ್ಲಿ ಗುಜರಾತ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಎದುರಾಗಲಿದೆ. ಗುಜರಾತ್ ನಲ್ಲಿ ಈ ಭಾರಿಯಾದರೂ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಟ್ಟು ಗೆಲ್ಲುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್​ ಕಸರತ್ತು ನಡೆಸಿದೆ. ಆದರೆ ಈ ಮಧ್ಯೆ ಆಮ್ ಆದ್ಮಿ ಪಕ್ಷವು ಗುಜರಾತ್​ನ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇಂದು ಹೇಳಿರುವುದು ರಾಷ್ಟ್ರ ರಾಜಕಾರಣ ದಲ್ಲಿ ಕೋಲಾಹಲ ಮೂಡಿಸಿದೆ.

ಈ ಬಗ್ಗೆ ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಮಾಹಿತಿ ನೀಡಿರುವ ಸಿಎಂ ಅರವಿಂದ ಕೇಜ್ರಿವಾಲ್, “ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ದೆಹಲಿಯಲ್ಲಿ ವಿದ್ಯುತ್ ಉಚಿತ ಇದೆ, ನೀರು, ಶಿಕ್ಷಣ ಸೇರಿದಂತೆ ಹಲವು ಯೋಜನೆ ಜಾರಿಯಲ್ಲಿವೆ, ಇಡೀ ದೇಶಕ್ಕೆ ಮಾದರಿ ಆಗಿವೆ, ಆದರೆ ಅಂಥ ಯೋಜನೆ ಗುಜರಾತ್ ನಲ್ಲಿ ಯಾಕಿಲ್ಲ. ಬಿಜೆಪಿ ಸರ್ಕಾರದ ದುರಾಡಳಿತವನ್ನು ಜನತೆ ತಿರಸ್ಕರಿಸುತ್ತಿದ್ದಾರೆ. ಆದರೆ ದೆಹಲಿಯ ಆಡಳಿತ ಮಾದರಿಯನ್ನು ಗುಜರಾತ್ ಗೆ ತರಲು ಸಾಧ್ಯವಿಲ್ಲ. ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಮಾದರಿಯಿದೆ. ಗುಜರಾತ್ ನ ಆಡಳಿತ ಮಾದರಿಯನ್ನು ಗುಜರಾತ್ ನ ಜನರು ನಿರ್ಧರಿಸುತ್ತಾರೆ ಎಂದಿದ್ದಾರೆ.

ಕಳೆದ 70 ವರ್ಷಗಳಿಂದ ಗುಜರಾತ್ ನಲ್ಲಿ ಆಸ್ಪತ್ರೆಗಳ ವ್ಯವಸ್ಥೆಯೂ ಸುಧಾರಿಸಿಲ್ಲ. ಆದರೆ ಈಗ ಆಲೋಚನೆಗಳು ಬದಲಾಗಬಹುದು ಎಂದು ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು