ಅಹಮದಾಬಾದ್(29/10/2020): ಗುಜರಾತ್ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಕೇಶುಭಾಯ್ ಪಟೇಲ್ ನಿಧನರಾಗಿದ್ದಾರೆ. ತಮ್ಮ 92 ನೇ ವಯಸ್ಸಿನಲ್ಲಿ ಕೇಶುಭಾಯ್ ಅಸುನೀಗಿದ್ದಾರೆ. ಗುಜರಾತ್ನಲ್ಲಿ ಎರಡು ಅವಧಿಗೆ ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.
ಗುರುವಾರ ಮುಂಜಾನೆ ಉಸಿರಾಟದ ತೊಂದರೆ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸೆಪ್ಟೆಂಬರ್ನಲ್ಲಿ ಕೇಶುಭಾಯ್ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಲಕ್ಷಣ ರಹಿತ ಕೊರೊನಾ ಬಂದಿತ್ತು. ನಂತರ ಚಿಕಿತ್ಸೆ ನೀಡಿ ಗುಣಮುಖರಾಗಿದ್ದರು. ಮುಖ್ಯಮಂತ್ರಿಯಾಗಿದ್ದ ವೇಳೆ ಗುಜರಾತ್ನಲ್ಲಿ ಹಲವು ಜನಪರ ಕಾರ್ಯಗಳನ್ನು ಕೇಶುಭಾಯ್ ಮಾಡಿದ್ದರು.