ನವದೆಹಲಿ(01-03-2021): ಪ್ರಧಾನಿ ಮೋದಿ ಮತ್ತು ಬಿಜೆಪಿಗೆ ಇಬ್ಬರು ಹಿರಿಯ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಕಾರ್ಯವೈಖರಿಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹಾಗೂ ರಷೀದ್ ಅಳ್ವಿ ಮೋದಿ ಮತ್ತು ಬಿಜೆಪಿಯನ್ನು ಹೊಗಳಿದ್ದಾರೆ, ಇತ್ತೀಚೆಗೆ ರಾಜ್ಯಸಭೆಯಲ್ಲಿ ಗುಲಾಂ ನಬಿ ಆಜಾದ್ ನಿವೃತ್ತಿ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಮೋದಿ ಭಾಷಣ ಮಾಡಿ ಭಾವುಕತೆಯಿಂದ ಮಾತನಾಡಿದ್ದರು. ಆ ಬಳಿಕ ಗುಲಾಂ ನಬಿ ಆಝಾದ್ ಮೋದಿಗೆ ಬಹಿರಂಗವಾಗಿ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.
ನಾನು ಹಳ್ಳಿಯಿಂದ ಬಂದವನು, ಮೋದಿ ಕೂಡ ಹಳ್ಳಿ ಹಿನ್ನೆಲೆಯವರಾಗಿದ್ದು, ಚಹಾ ಮಾರುತ್ತಿದ್ದ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಇದು ಇಷ್ಟವಾಗುತ್ತದೆ ಗುಲಾಂ ನಬಿ ಆಝಾದ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಷೀದ್ ಅಳ್ವಿ ಬಿಜೆಪಿಯ ಕಾರ್ಯವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ, ಬಿಜೆಪಿ ಪ್ರತೀ ಚುನಾವಣೆಯನ್ನೂ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಬಿಜೆಪಿಯ ನಾಯಕತ್ವ ಮೆಚ್ಚುವಂತದ್ದು ಎಂದು ಹೇಳಿದ್ದಾರೆ.