ನವದೆಹಲಿ(09-02-2021): ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಸದಸ್ಯತ್ವ ಸ್ಥಾನದಿಂದ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ವಿದಾಯ ಭಾಷಣವನ್ನು ಮಾಡಿದ್ದಾರೆ.
ಪಾಕಿಸ್ತಾನಕ್ಕೆ ತೆರಳದ ಅದೃಷ್ಟವಂತರಲ್ಲಿ ನಾನೂ ಒಬ್ಬ. ಪಾಕಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಓದಿದಾಗ, ನಾನೊಬ್ಬ ಭಾರತೀಯ ಮುಸ್ಲಿಮನಾಗಿರುವುದಕ್ಕೆ ಹೆಮ್ಮೆಯಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನನ್ನನ್ನು ಜನರು ಪ್ರೀತಿಸಿದ್ದಾರೆ ಎಂದು ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದೆ. ಈ ವೇಳೆ ಜಮ್ಮುವಿನಲ್ಲಿ ನಡೆದ ಭಯೋತ್ಪಾದನಾ ದಾಳಿಯಿಂದ ನೋವು ತಂದಿದೆ. ಭಯೋತ್ಪಾದನೆ ಈ ದೇಶದಲ್ಲಿ ಕೊನೆಗೊಳ್ಳಲಿ ಎಂದು ಅಲ್ಲಾನನ್ನು ಬೇಡುತ್ತೇನೆ ಎಂದು ಹೇಳಿದ್ದಾರೆ.