ಗ್ರಾಮೀಣ ಪ್ರದೇಶದಲ್ಲಿ ಆರಂಭವಾಗಲಿದೆ ಸರಕಾರಿ ಸೆಲೂನ್!

AIR CUTTING SHOPS
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(16-11-2020): ಸಮಾಜ ಕಲ್ಯಾಣ ಇಲಾಖೆ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕ್ಷೌರದಂಗಡಿಗಳನ್ನು ತೆರೆಯಲು ಮುಂದಾಗಿದೆ.

ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಸಿಎಂ ಬಿಎಸ್ ಯಡಿಯೂರಪ್ಪಗೆ ಪ್ರಸ್ತಾಪವನ್ನು ಸಲ್ಲಿಸಿದೆ.

ರಾಜ್ಯದ ವಿವಿಧೆಡೆ ಎಸ್ಸಿ-ಎಸ್ಟಿ ಜನರಿಗೆ ಕ್ಷೌರ ಮಾಡಲು ನಿರಾಕರಿಸಲಾಗುತ್ತಿದೆ. ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ. ಇದರಿಂದಾಗಿ ದೌರ್ಜನ್ಯವನ್ನು ತಡೆಯಲು ಸರ್ಕಾರದಿಂದ ಕ್ಷೌರದಂಗಡಿ ಆರಂಭಿಸಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ.

ಈ ಕುರಿತು ಸಿಎಂ ನೇತೃತ್ವದಲ್ಲಿ ಚರ್ಚೆ ನಡೆಯಲಿದ್ದು, ಶೀಘ್ರವೇ ಸರಕಾರ ಕ್ಷೌರದಂಗಡಿಯನ್ನು ಆರಂಭಿಸುವ ಸಾಧ್ಯತೆ ಇದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು