ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ, ಲಿಂಗಾಯತ ವಿರೋಧಿ ಸಿದ್ದರಾಮಯ್ಯನವರ ಗುರಿ : ಬಿಜೆಪಿ ಆಕ್ರೋಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಸಮಾಜವಾದದ ಹೆಸರಿನಲ್ಲಿ ಜಾತಿವಾದ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಈಗ ರಾಜ್ಯದ ಯಾವ ಕ್ಷೇತ್ರದಲ್ಲೂ ನೆಲೆಯಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯ ಹೊತ್ತಿಗೆ ಚಾಮರಾಜಪೇಟೆಗೆ ವಲಸೆ ಹೋಗಲು ಸಿದ್ದತೆ ನಡೆಸಿರುವ ಸಿದ್ದರಾಮಯ್ಯ ಈಗ ಒಂದು ವರ್ಗದ ಓಲೈಕೆಗಾಗಿ ಹಿಂದೂ ಧರ್ಮದ ಅವಹೇಳನಕ್ಕೆ ಮುಂದಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

“ಯಡಿಯೂರಪ್ಪನವರು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಮಠಾಧೀಶರನ್ನು ಮನೆಗೆ ಕರೆಸಿ ದುಡ್ಡು ಹಂಚಿದರು” ಎಂದು ಟ್ವೀಟ್ ಮಾಡಿದ ಸಿದ್ದರಾಮಯ್ಯ ಮಠಾಧೀಶರಿಗೆ ಅವಮಾನ ಮಾಡಿದ್ದಾರೆ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದೆ.

ಈ ಕುರಿತು #ಲಿಂಗಾಯತವಿರೋಧಿಸಿದ್ದರಾಮಯ್ಯ ಎನ್ನುವ ಹ್ಯಾಶ್ ಟ್ಯಾಗ್ ಮೂಲಕ ಸರಣಿ ಟ್ವೀಟ್ ಮಾಡಿದ ಬಿಜೆಪಿ, ಸಿದ್ದರಾಮಯ್ಯ ಅವರೇ, ವೀರಶೈವ – ಲಿಂಗಾಯತ ಸಮುದಾಯದ ಮೇಲೆ ನಿಮಗೇಕೆ ದ್ವೇಷ? ಹಿಂದೆ ಧರ್ಮ ಒಡೆಯಲು ಹೋಗಿ ಆ ಸಮುದಾಯದ ಭಾವನೆ ಕೆರಳಿಸಿದಿರಿ. ಈಗ ಬೊಮ್ಮಾಯಿ ಜಾತಿಯವರು ಕಂಬಳಿ ನೇಯುತ್ತಾರಾ ಎಂದು ಪ್ರಶ್ನಿಸುವ ಮೂಲಕ ಕಾಯಕ ಧರ್ಮವನ್ನು ಅಪಮಾನ ಮಾಡುತ್ತಿದ್ದೀರಿ ಎಂದು ತಿರುಗೇಟು ನೀಡಿದೆ.

ಬೊಮ್ಮಾಯಿ ಜಾತಿಯವರು ಕಂಬಳಿ ನೇಯ್ತಾರಾ? ಕಾಗೇರಿ ಜಾತಿಯವರು ಕುರಿ ಕಾಯ್ತಾರಾ? ಎಂದು ಪ್ರಶ್ನಿಸುವ ಮೂಲಕ ಸಮಾಜವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದೀರಿ ಸಿದ್ದರಾಮಯ್ಯ? ಹಾಲಿನಂಥ ಸಮಾಜದಲ್ಲಿ ಜಾತಿ ಹುಳಿ ಹಿಂಡಿ ಒಡೆಯುವುದೇ  ನಿಮ್ಮ ರಾಜಕೀಯ ಧರ್ಮ, ಸಮಾಜ ಒಟ್ಟಾಗಿದ್ದರೆ ಈ ಮಜವಾದಿಗೆ ಸಂಕಟವಾಗುತ್ತದೆ. ವೀರಶೈವ- ಲಿಂಗಾಯತ ಸಮುದಾಯದ ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಎಂದಾದರೂ ಗೌರವ ವ್ಯಕ್ತಪಡಿಸಿದ ಉದಾಹರಣೆ ಇದೆಯೇ?

ಧರ್ಮ ವಿಭಜನೆಯ ಪ್ರಯತ್ನ ಮಾಡುವಾಗ “ಲಿಂಗಾಯತ ಸ್ವಾಮೀಜಿಗಳು ನೀಡಿದ ಮನವಿ” ಪ್ರಕಾರ ಪ್ರತ್ಯೇಕ ಧರ್ಮದ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿದ್ದೆ ಎಂದು ಜಾರಿಕೊಂಡಿದ್ದು ನೆನಪಿಲ್ಲವೇ? ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಹಿಂದೂ ಧರ್ಮ ಒಡೆಯುವ ಪ್ರಯತ್ನ ನಡೆಸಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಅಸ್ತ್ರ ಪ್ರಯೋಗಿಸಿ ಎಂ.ಬಿ.ಪಾಟೀಲರನ್ನು ಬಲಿಪಶುವಾಗಿಸಿದರು ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಸಿದ್ದರಾಮಯ್ಯನವರೇ, ವೀರಶೈವ- ಲಿಂಗಾಯಿತ ಸಮುದಾಯ ಬಿಜೆಪಿ ಜೊತೆ ನಿಲ್ಲುವುದನ್ನು ತಡೆಯುವುದಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದಲ್ಲವೇ? ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಅವರ ಗುರಿ.

 

ಗಡಿಗೆಯಲ್ಲಿ ತುಂಬಿರುವ ಹಾಲನ್ನು ಕೆಡಿಸುವುದಕ್ಕೆ ಒಂದು ಹನಿ ಹುಳಿ ಸಾಕಲ್ಲವೇ ? ಹಾಗೆಯೇ ಸಮಾಜ ವಿಭಜನೆಗೆ ಸಿದ್ದರಾಮಯ್ಯ ಅವರ ದ್ವೇಷದ ನುಡಿ ಸಾಕು. ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಸಿದ್ದರಾಮಯ್ಯ ಅವರಿಗೆ ಚಾಳಿಯಾಗಿಬಿಟ್ಟಿದೆ ಎಂದು ರಾಜ್ಯ ಬಿಜೆಪಿ ಘಟಕ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಸಮರ ಮುಂದುವರಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು