ಹಾಲು ಉತ್ಪಾದಕ ಸಂಘಗಳ ನೌಕರರನ್ನು ‘ಕೋವಿಡ್ ವಾರಿಯರ್ಸ್’ ಎಂದು ಘೋಷಿಸಬೇಕು: ಎಚ್.ಡಿ.ಕುಮಾರಸ್ವಾಮಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೋವಿಡ್ 19 ಈಗ ಹಳ್ಳಿ ಹಳ್ಳಿಗಳನ್ನು ವೇಗವಾಗಿ ವ್ಯಾಪಿಸುತ್ತಿದೆ. ಸೋಂಕಿತರು ಹಾಲನ್ನು ಡೈರಿಗಳಿಗೆ ತಂದು ಹಾಕುತ್ತಿರುವುದರಿಂದ ರೋಗ ಇನ್ನಷ್ಟು ಹಬ್ಬುತ್ತಿದೆ. ಗ್ರಾಮೀಣ ಭಾಗದ ಈ ಹೊಸ ಸಮಸ್ಯೆಯನ್ನು ಸರಕಾರ, ಕೆಎಂಎಫ್ ಮತ್ತು ಹಾಲು ಒಕ್ಕೂಟಗಳು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಈಗಲೇ ಜಾಗೃತಿ ಮೂಡಿಸದಿದ್ದರೆ ಹಳ್ಳಿಗಳಲ್ಲಿ ಸಾವುನೋವಿನ ಪ್ರಮಾಣ ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ. ಕೋವಿಡ್ ಸೋಂಕಿತರ ಮನೆಯ ರಾಸುಗಳಿಂದ ಕರೆದ ಹಾಲನ್ನು ಸೋಂಕಿತರೇ ನೇರವಾಗಿ ಡೈರಿಗೆ ತಂದು ಹಾಲು ಹಾಕುವುದು ಬೇಡ.
ಸೋಂಕಿತರಲ್ಲದ ಮನೆಯ ಆರೋಗ್ಯವಂತ ಸದಸ್ಯರು ಹಾಲನ್ನು ತಂದುಹಾಕುವುದರಿಂದ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಬಹುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಡೈರಿಗೆ ಹಾಲು ಹಾಕಲು ಬಂದವರು ಕಡ್ಡಾಯವಾಗಿ ಶುಚಿತ್ವ, ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.ಕಡ್ಡಾಯವಾಗಿ ಡೈರಿಗಳಲ್ಲಿ ಶುಚಿತ್ವ ಕಾಪಾಡುವುದರ ಜತೆಗೆ ಪರಸ್ಪರ ಅಂತರವನ್ನು ಕಾಯ್ದುಕೊಳ್ಳಬೇಕು. ಹಾಲು ಉತ್ಪಾದಕ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಬೇಕು. ಪಶುವೈದ್ಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು