ಹನೂರು ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ- ಕಾಂಗ್ರೆಸ್ ಮೈತ್ರಿ! ಚರ್ಚೆಗೆ ಗ್ರಾಸವಾದ ರಾಜಕೀಯ ವಿರೋಧಿಗಳ ಮೈತ್ರಿ

congress-bjp allince
Share on facebook
Share on twitter
Share on linkedin
Share on whatsapp
Share on telegram
Share on email
Share on print

ಚಾಮರಾಜನಗರ(07-11-2020): ಹನೂರು ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ಮೈತ್ರಿ ಗೆಲುವನ್ನು ಸಾಧಿಸಿದೆ. ಕಟಿಬದ್ಧ ರಾಜಕೀಯ ವಿರೋಧಿಗಳ ಮೈತ್ರಿ ಇದೀಗ ಚರ್ಚೆಗೆ ಗ್ರಾಸವಾಗಿದೆ.

13 ಸದಸ್ಯ ಬಲದ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯ ಚಂದ್ರಮ್ಮ ಅಧ್ಯಕ್ಷೆಯಾಗಿ ಹಾಗೂ ಕಾಂಗ್ರೆಸ್​ನ ಹರೀಶ್​ ಕುಮಾರ್​ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸ್ಥಳೀಯ ಕಾಂಗ್ರೆಸ್​ ಶಾಸಕ ನರೇಂದ್ರ ಅವರು ಬಿಜೆಪಿಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನು ಬೆಂಬಲಿಸಿದರೆ, ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್​ ಕಾಂಗ್ರೆಸ್​ನ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನು ಬೆಂಬಲಿಸಿದ್ದಾರೆ.

ಬಳಿಕ ಪ್ರತಿಕ್ರಿಯಿಸಿದ ವಿ.ಶ್ರೀನಿವಾಸ ಪ್ರಸಾದ್, ಸಮಯ, ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತವೆ. ಸ್ಥಳೀಯವಾಗಿ ಮೈತ್ರಿ ಅನಿವಾರ್ಯವಾಗಿತ್ತು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು