ಉತ್ತರ ಪ್ರದೇಶ(06-10-2020): ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಜಾತಿ ಆಧಾರಿತ’ ಸಂಘರ್ಷಕ್ಕೆ ಪ್ರಚೋದಿಸಿದ್ದಾರೆಂದು ಯುಪಿ ಪೊಲೀಸರು ಅನಾಮಧೇಯ ವ್ಯಕ್ತಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.
19 ವರ್ಷದ ದಲಿತ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ, ಸಾವು ವಿವಾದದ ಮಧ್ಯೆ ರಾಜಕೀಯ ನಾಯಕರು ಮತ್ತು ಕಾರ್ಯಕರ್ತರು ನಿರಂತರ ಪ್ರತಿಭಟನೆಗಳು ಮಾಡಿದ ಕಾರಣ ಪೊಲೀಸರು ಈ ರೀತಿ ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
ಎಫ್ಐಆರ್ ನ್ನು ಚಂದಪಾ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಆರೋಪಿಗಳನ್ನು “ಅಜ್ಞಾತ” ಎಂದು ಹೆಸರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಅಡಿಯಲ್ಲಿ 19 ಆರೋಪಗಳನ್ನು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಐಪಿಸಿ ವಿಭಾಗಗಳಲ್ಲಿ 124 ಎ (ದೇಶದ್ರೋಹ), 505, 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 ರಡಿ ಪೊಲೀಸರು ಕೇಸ್ ನ್ನು ದಾಖಲಿಸಿದ್ದಾರೆ.