ಹೊಸದೆಹಲಿ(15/10/2020): ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯಾದ ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿಯನ್ನು ಚಿಕಿತ್ಸೆಗೆ ಕರೆತಂದಿದ್ದ ಆಸ್ಪತ್ರೆ ಸಿಸಿಟಿವಿ ದೃಶ್ಯಗಳು ನಾಪತ್ತೆಯಾಗಿರುವುದು ಬಹಿರಂಗವಾಗಿದೆ.
ಸಿಬಿಐ ತಂಡ ಘಟನೆಯ ಸಾಕ್ಷ್ಯಗಳನ್ನು ಸಂಗ್ರಹಿಸಲು ಹತ್ರಾಸ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿತ್ತು. ಸಿಬಿಐ ತಂಡ ಸಿಸಿಟಿವಿಯನ್ನು ಪರಿಶೋಧಿಸಿದಾಗ ಅಲ್ಲಿ ಯಾವುದೇ ಸಾಕ್ಷ್ಯಗಳಿಲ್ಲದಿರುವುದು ಬೆಳಕಿಗೆ ಬಂದಿದೆ.
ಸಂತ್ರಸ್ತ ಬಾಲಕಿಯನ್ನು ಚಿಕಿತ್ಸೆಗಾಗಿ ಕರೆತಂದಾಗ ಪೊಲೀಸರು ಅವುಗಳ ದೃಶ್ಯಗಳನ್ನು ಚಿತ್ರೀಕರಿಸಿರಲಿಲ್ಲ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಆರೋಪಿಸಿದೆ. ಆದರೆ, ಸಿಸಿಟಿವಿ ದೃಶ್ಯಗಳು ಮಾಯವಾಗಿರುವುದರ ಹಿಂದೆ ಪೊಲೀಸರ ನಿರ್ಲಕ್ಷ್ಯ ಹಾಗೂ ಆಸ್ಪತ್ರೆಯ ಲೋಪ ಎದ್ದು ಕಾಣುತ್ತಿದ್ದು, ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕರು ಮತ್ತು ವೈದ್ಯರನ್ನು ಸಿಬಿಐ ತರಾಟೆಗೆ ತೆಗೆದುಕೊಂಡಿದೆ.