ಪೊಲೀಸರೇ ನನ್ನ ತಂದೆಯನ್ನು ಕೊಂದರು! ಮುಖ್ಯಪೇದೆ ನ್ಯಾಯಕ್ಕಾಗಿ ಅಳಲು

police
Share on facebook
Share on twitter
Share on linkedin
Share on whatsapp
Share on telegram
Share on email
Share on print

ವಿಜಯಪುರ(05-11-2020): ಪೊಲೀಸರೇ ನನ್ನ ತಂದೆಯನ್ನು ಕೊಲೆ ಮಾಡಿದ್ದಾರೆಂದು ಪೊಲೀಸ್ ಮುಖ್ಯಪೇದೆಯೋರ್ವರು ಹೇಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಪೇದೆ, ತಂದೆ ಹನಮಂತರಾಯ ಸಾವು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದಾರೆ.

ನಾನೂ ಒಬ್ಬ ಪೊಲೀಸ್‌ ಹೆಡ್‌ಕಾನ್‌ಸ್ಟೆಬಲ್‌ ಆಗಿದ್ದರೂ ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಎಂದು ಸಿಂದಗಿ ತಾಲ್ಲೂಕಿನ ಬಂಟನೂರ ಗ್ರಾಮದ ನಿವಾಸಿ ಬಸವರಾಜ ಪಾಟೀಲ ವಿಡಿಯೋದಲ್ಲಿ ಹೇಳಿದ್ದು, ತಂದೆ ಹನಮಂತರಾಯ ಅವರಿಗೆ ದಾಯಾದಿಗಳೊಂದಿಗೆ ಜಮೀನು ಸಂಬಂಧ ತಕರಾರಿತ್ತು. ಅವರಿಂದ ಹಣ ಪಡೆದ ಸಿಂದಗಿ ಪೊಲೀಸರು, ನಮ್ಮ ಕುಟುಂಬದ ವಿರುದ್ಧ 2006ರಿಂದ ದೌರ್ಜನ್ಯ ನಡೆಸುತ್ತಿದ್ದಾರೆ. 2016ರಲ್ಲಿ ತಂದೆಯನ್ನು ಕೊಲೆ ಮಾಡಿದ್ದಾರೆ. ತಾಯಿ, ಸಹೋದರರ ಮೇಲೆಯೂ ಹಲ್ಲೆ ಮಾಡಿದ್ದರು. ಅವರಿಬ್ಬರು ಚೇತರಿಸಿಕೊಂಡಿದ್ದಾರೆ ಎಂದು ಹೇಳಿದರು.

ತಂದೆ ಸಾಯುವ ಮುನ್ನ ಬರೆದ ಡೆತ್‌ ನೋಟ್‌ನಲ್ಲಿ ದೌರ್ಜನ್ಯ ಎಸಗಿದ ಸಿಂದಗಿಯ ಎಂಟು ಜನ ಪೊಲೀಸರ ಹೆಸರುಗಳನ್ನು ಬರೆದಿದ್ದಾರೆ. ದಾಖಲೆ, ಸಾಕ್ಷಿಗಳಿದ್ದರೂ ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇದುವರೆಗೂ ಅವರ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು