ಬೆಂಗಳೂರು(30-10- 2020): ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು, ಮೈಸೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಶಿವಮೊಗ್ಗ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಉತ್ತರ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಲಿದೆ. ಈ ಮಳೆ ನ.3ರವರೆಗೂ ಮುಂದುವರೆಯಲಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.