ನಿರಂತರ ಮಳೆಗೆ 11 ಮಂದಿ ಬಲಿ| ಜಲಾವೃತಗೊಂಡ ತಗ್ಗುಪ್ರದೇಶಗಳು

heavy rain
Share on facebook
Share on twitter
Share on linkedin
Share on whatsapp
Share on telegram
Share on email
Share on print

ತೆಲಂಗಾಣ(14-10-2020): ತೆಲಂಗಾಣ ರಾಜ್ಯದ ಹಲವಾರು ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ.

ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು , ತಗ್ಗು ಪ್ರದೇಶಗಳು ಜಲಾವೃತವಾಗಿದೆ.  ಭಾರಿ ಮಳೆಯಿಂದಾಗಿ ಬಂಡಲಗುಡದ ಮೊಹಮ್ಮದಿಯಾ ಬೆಟ್ಟದಲ್ಲಿ ಗಡಿ ಗೋಡೆ ಕುಸಿದು 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೈದರಾಬಾದ್ ಲೋಕಸಭಾ ಸಂಸದ ಅಸದುದ್ದೀನ್ ಒವೈಸಿ ಟ್ವೀಟ್ ಮಾಡಿದ್ದಾರೆ.

 ಎರಡು ಮನೆಗಳ ಕಾಂಪೌಂಡ್ ಗೋಡೆಗಳ ಮೇಲೆ ಬಂಡೆಗಳು ಬಿದ್ದು, ಸ್ಥಳದಲ್ಲೇ ಎಂಟು ಜನರು ಸಾವನ್ನಪ್ಪಿದರು ಮತ್ತು ನಾಲ್ಕು ಜನರು ಗಾಯಗೊಂಡರು. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರೀ ಮಳೆಯಿಂದಾಗಿ ಮಂಗಳವಾರ ಇಬ್ರಾಹಿಂಪಟ್ಟಣಂ ಪ್ರದೇಶದಲ್ಲಿ ಹಳೆಯ ಮನೆಯ ಮೇಲ್ಚಾವಣಿ  ಕುಸಿದು 40 ವರ್ಷದ ಮಹಿಳೆ ಮತ್ತು 15 ವರ್ಷದ ಬಾಲಕಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು