ಹೈ ಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ! ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಠಿಸಿದ ಸಿಎಂ ಯಡಿಯೂರಪ್ಪ ಹೇಳಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರದಲ್ಲಿ ಒಳಗೊಳಗೇ ನಡೆಯುತ್ತಿದ್ದ ಶೀತಲ ಸಮರ ಹೊರ ಬಂದಿದೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವೆನೆಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸಿಎಂ ಪುತ್ರ ವಿಜಯೇಂದ್ರರ ದೆಹಲಿ ಭೇಟಿ ಬೆನ್ನಲ್ಲೇ ಯಡಿಯೂರಪ್ಪ ಇಂತಹ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ ಮತ್ತು ಎಲ್ಲಿಯವರೆಗೆ ಅವರು ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ ಎಂದು ಸುದ್ದಿಗಾರರ ಜೊತೆಗೆ ಮಾತನಾಡುತ್ತಾ ಯಡಿಯೂರಪ್ಪ ಹೇಳಿದ್ದಾರೆ. ಯಡಿಯೂರಪ್ಪ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಕಡಕ್ ಆಗಿ ಹೇಳಿದ್ದಾರೆ. ನಾಯಕತ್ವ ಬದಲಾವಣೆಗೆ ಕಸರತ್ತು ನಡೆಯುತ್ತಿರುವ ಬಗ್ಗೆ ಯಡಿಯೂರಪ್ಪ ಗಮನಕ್ಕೆ ಬಂದಿದ್ದು, ಇದಕ್ಕೆಲ್ಲಾ ಉತ್ತರವಾಗಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆನ್ನಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು