ರಾಜಕಾರಣಿ, ಸಿನಿಮಾ ತಾರೆಯರು ಕೋರೋನಾ ನಿಯಮ ಉಲ್ಲಂಘಿಸಿದರೂ ಯಾಕೆ ಕ್ರಮಕೈಗೊಳ್ಳುತ್ತಿಲ್ಲ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಬೆಂಗಳೂರು(05/11/2020): ರಾಜಕಾರಣಿಗಳು, ಸಿನಿಮಾ ತಾರೆಯರು ಕೊರೋನ ನಿಯಮಾವಳಿ ಉಲ್ಲಂಘಿಸಿದರೂ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿರದಿರುವುದನ್ನು ಮತ್ತು ಗಂಭೀರ ಸೆಕ್ಷನ್‍ಗಳಡಿ ಏಕೆ ಬಂಧಿಸಿಲ್ಲ ಎಂದು ಸಾರ್ವಜನಿಕ‌ ಹಿತಾಸಕ್ತಿ ಅರ್ಜಿಯ ವಿಚಾರಣೆ ಮಾಡುತ್ತಾ ಹೈಕೋರ್ಟ್ ಪ್ರಶ್ನಿಸಿದೆ.

ಜನಸಾಮಾನ್ಯರಿಗೆ ನೀವು 250 ರೂಪಾಯಿ ದಂಡ ವಿಧಿಸುತ್ತೀರಿಯಲ್ಲವೇ.‌ ಹಾಗಾದರೆ, ರಾಜಕಾರಣಿಗಳ, ಸಿನಿ ತಾರೆಯರ ವಿರುದ್ಧ ಎಫ್‍ಐಆರ್ ಏಕೆ ದಾಖಲಿಸಲ್ಲ. ಯಾವುದೇ ಕ್ರಮವಿಲ್ಲ ಏಕೆ ಎಂದು ಪ್ರಶ್ನಿಸಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ಆಯ್ಕೆಯಾದ ಬಳಿಕ ಬೆಂಗಳೂರು ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೇಜಸ್ವಿ ಸೂರ್ಯ ಅವರ ಮೆರವಣಿಗೆ ಮಾಡಿದ್ದಾರೆ. ನೂರಾರು ಜನ ಸೇರಿ ಮೆರವಣಿಗೆ ಮಾಡುವ ಮೂಲಕ ಕೊರೋನ ನಿಯಮ ಉಲ್ಲಂಘಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಸರಕಾರದ ಹಾಗೂ ಅರ್ಜಿದಾರರ ಪರವಾದ ವಕೀಲರ ವಾದವನ್ನು ಆಲಿಸಿದ ನ್ಯಾಯಪೀಠವು ಕೊರೋನ ನಿಯಮಾವಳಿ ಉಲ್ಲಂಘಿಸಿದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿತು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು