ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆ| ಸರಕಾರಕ್ಕೆ ಮಹತ್ವದ ಸೂಚನೆ ನೀಡಿದ ಹೈಕೋರ್ಟ್

karnataka high court
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(09-02-2021): ಧಾರ್ಮಿಕ ಸ್ಥಳಗಳಲ್ಲಿ ಶಬ್ದಮಾಲಿನ್ಯ ತಡೆಯಲು ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಧ್ವನಿವರ್ಧಕಗಳ ನಿಯಂತ್ರಣ ಕೋರಿ ಸಲ್ಲಿಸಿದ್ದ  ಅರ್ಜಿಯನ್ನು ವಿಚಾರಣೆ ನಡೆಸಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಎಸ್ ಎಸ್ ಮಗದುಮ್‌ ಅವರಿದ್ದ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.

ಧಾರ್ಮಿಕ ಸ್ಥಳಗಳಲ್ಲಿ ಶಬ್ದ ಮಾಲಿನ್ಯ ತಡೆಯುವ ಬಗ್ಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಲಿ, ಇದು ರಾಜ್ಯದೆಲ್ಲೆಡೆ ಅನ್ವಯವಾಗಲಿ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಧಾರ್ಮಿಕ ಸ್ಥಳಗಳಲ್ಲಿ ಶಬ್ದ ಮಾಲಿನ್ಯ ನಿಯಮಗಳ ಉಲ್ಲಂಘನೆಯಾಗುತ್ತಿದೆ. ಸಾರ್ವಜನಿಕ ಭಾಷಣಗಳ ಸದ್ದು ಕಾನೂನಿನ ಪ್ರಕಾರ 10 ಡಿಬಿ (ಎ) ಸಾಮಾನ್ಯ ಮಾನದಂಡದ ಶಬ್ಧ ಮಟ್ಟ ಮೀರಬಾರದು ಎಂದು ಅರ್ಜಿದಾರರು ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು