ಬೆಂಗಳೂರು (22-02-2020): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಿಂದುಳಿದ ವರ್ಗಗಳ ಆಯೋಗದ ವರದಿ ಬಳಿಕ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಈ ಕುರಿತು ಹಿಂದುಳಿದ ವರ್ಗಗಳ ಆಯೋಗವೂ ಅಧ್ಯಯನ ನಡೆಸಿ ಕ್ರಮಬದ್ಧವಾಗಿ ವರದಿ ಕೊಡಲಿದೆ. ಆಯೋಗವೇ ಮೀಸಲಾತಿ ಯಾವಾಗ ಕೊಡಬೇಕು ಅಂತ ನಿರ್ಧಾರ ಮಾಡಲಿದೆ ಎಂದು ಬೊಮ್ಮಯಿ ಹೇಳಿಕೆ ನೀಡಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಸಮುದಾಯದ ಸ್ವಾಮೀಜಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ಸಚಿವರು ಕೂಡ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.