ಹೊರದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಶೀಘ್ರವಾಗಿ ಲಸಿಕೆ ನೀಡಬೇಕು: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ . ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಕೋರಿದ್ದಾರೆ.

ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು.

ವ್ಯಾಕ್ಸಿನ್ ಪಡೆಯುವ ಜಾಗದ ಪಕ್ಕದಲ್ಲೇ ಪಾಸಿಟಿವ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ವಾರ್ಡಗಳಿವೆ. ಹೀಗಾಗಿ ಜನರಿಗೆ ಸೋಂಕು ತಗುಲುವ ಆತಂಕ ಎದುರಾಗಿದೆ. ಕೂಡಲೇ ಜಾರಿಗೆ ಬರುವಂತೆ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಹತ್ತಿರದ ಶಾಲಾ-ಕಾಲೇಜುಗಳು, ಸಮುದಾಯ ಭವನಗಳಿಗೆ ಬದಲಾವಣೆ ಮಾಡಬೇಕೆಂದು ಎಚ್.ಡಿ.ಕೆ. ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು