ಹೈದರಾಬಾದ್(18/10/2020); ಹೈದರಬಾದ್ ನಗರದಲ್ಲಿ ಕಳೆದೊಂದು ವಾರದಿಂದ ಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೆಚ್ಚಿನ ಭಾಗಗಳ ಜನಜೀವನ ಅಸ್ತವ್ಯಸ್ತವಾಗಿದ್ದು, ಸಾವಿನ ಸಂಖ್ಯೆ 50ಕ್ಕೇರಿದೆ.
ಹಗಲು ಹೊತ್ತು ಮಳೆಯ ತೀವ್ರತೆ ಕಡಿಮೆಯಾಗಿದ್ದರೂ, ರಾತ್ರಿಯಿಡೀ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್ಎಂಸಿ) ಮತ್ತು ಪೊಲೀಸರು ಹೈದರಾಬಾದ್ನ ಮುಳುಗಿರುವ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.