ಇಂಧನ ಬೆಲೆ ಏರಿಕೆ: ಜೂನ್ 11ಕ್ಕೆ ಕಾಂಗ್ರೆಸ್ ನಿಂದ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ದೇಶದಲ್ಲಿ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಇಂಧನ ಬೆಲೆ ಏರಿಕೆ ವಿರೋಧಿಸಿ ಜೂ.11ಕ್ಕೆ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ ನಡೆಸಲು ಮುಂದಾಗಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ಇಂಧನ ಬೆಲೆಗ ರೂ.100 ಗಡಿ ದಾಟಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷವು ಬೀದಿಗಿಳಿಯಲು ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಎಲ್ಲ ರಾಜ್ಯ ಘಟಕಗಳಿಗೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವಂತೆ ಸೂಚಿಸಲಾಗಿದೆ.

ಕೋವಿಡ್ ಕಠಿಣ ಸಂದರ್ಭದಲ್ಲಿ ಜನತೆ ಉದ್ಯೋಗ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂಥ ಕಾಲದಲ್ಲಿ ತೈಲ ಬೆಲೆ ಏರಿಕೆ ಜನರಿಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸಿದೆ. ಸಾರ್ವಜನಿಕ ಲೂಟಿ ಮತ್ತು ಬೆಲೆ ಏರಿಕೆ ವಿರುದ್ಧ ತುರ್ತಾಗಿ ಪ್ರತಿಭಟಿಸಲು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್, ರಾಜ್ಯ ಘಟಕಗಳಿಗೆ ತಿಳಿಸಿದ್ದಾರೆ

ದೇಶದಲ್ಲಿ ಸಾಂಕ್ರಾಮಿಕ ರೋಗ, ಆರ್ಥಿಕ ಕುಸಿತ, ನಿರುದ್ಯೋಗ, ವೇತನ ಕಡಿತ, ಉದ್ಯೋಗ ಕಡಿತದಿಂದಾಗಿ ಸಂಕಷ್ಟದಲ್ಲಿರುವ ಜನರ ಮೇಲೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳ ಅನಿಯಂತ್ರಿತ ಏರಿಕೆಯು ಬಲವಾದ ಹೊಡೆತ ನೀಡಿದೆ. ಶತಕ ಭಾರಿಸಿದ ಪೆಟ್ರೋಲ್ ಬೆಲೆ ಹಾಗೂ ಡಿಸೇಲ್ ಬೆಲೆಯನ್ನು ವಿರೋಧಿಸಲು ಕಾಂಗ್ರೆಸ್ ಸಜ್ಜಾಗಿದೆ. ಸಾಂಕೇತಿಕ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು