ಮೈಸೂರು(19-11-2020): ಭಾರತದ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ದಿನದ ಹಿನ್ನೆಲೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮೈಸೂರು ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಡಲಾಯಿತು.
ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಬಳಿಕ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನಿರ್ಧಾರಗಳು ಹಾಗೂ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಮೈಸೂರು ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೈಸೂರಿನ ಇಂದಿರಾ ಗಾಂಧಿ ಕಾಂಗ್ರೆಸ್ ಭವನದ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.