ಬೆಂಗಳೂರು : ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗಲಿದ್ದು, ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಷ್ಣಾಂಶ ಏರಿಳಿತದಿಂದ ರಾಜ್ಯದಲ್ಲಿ ತಾಪಮಾನ ಹೆಚ್ಚಳದ ಜೊತೆಗೆ ಮಾರ್ಚ್ ತಿಂಗಳ ಅಂತ್ಯದವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.