ಇಂದಿನಿಂದ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆಯಿರಿ : ಸಿಎಂ ಬಿ.ಎಸ್ ಯಡಿಯೂರಪ್ಪ ಮನವಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, 45 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, “ನಾಗರಿಕ ಬಂಧುಗಳೇ, ಕೋವಿಡ್ ಅಪಾಯವನ್ನು ನಿರ್ಲಕ್ಷಿಸದಿರಿ. ಎಲ್ಲ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ. ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚ. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಇಂದಿನಿಂದ ಲಸಿಕೆ ಪಡೆಯಬಹುದು, ನಿಮ್ಮ ಹತ್ತಿರದ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದುಕೊಳ್ಳಿ. ಜೊತೆಯಾಗಿ ನಾವೆಲ್ಲರೂ ಕೊರೋನಾ ಹಿಮ್ಮೆಟ್ಟಿಸೋಣ” ಎಂದು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಈ ಹಿಂದೆ 60 ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗಿತ್ತು, ಎಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಕೊರೊನಾ ಲಸಿಕೆ ಪಡೆಯುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಇಂದಿನಿಂದ ರಾಜ್ಯದಲ್ಲಿ 5 ಸಾವಿರ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ವ್ಯಾಕ್ಸಿನ್ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು