ದೇಶವನ್ನುದ್ದೇಶಿಸಿ ಇಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ
ಅವರು ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ಸಂಜೆ 5 ಗಂಟೆಗೆ ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಅಧಿಕೃತವಾಗಿ ಟ್ವೀಟ್ ಮಾಡಿದೆ.

ಕಳೆದ ಎಪ್ರಿಲ್-ಮೇ ತಿಂಗಳಲ್ಲಿ ದೇಶದಲ್ಲಿ ಕೋವಿಡ್ 2ನೇ ಅಲೆಯ ಭೀಕರತೆ ಕುರಿತು ಪ್ರಸ್ತಾಪ ಮಾಡುವ ಅವರು ಕೋವಿಡ್ ಹೊಸ ಪ್ರಕರಣಗಳು ಈಗ ಇಳಿಮುಖ ಆಗಿರುವ ಸಮಯದಲ್ಲಿ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೋವಿಡ್ ಎರಡನೇ ಅಲೆಯಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಕಟ್ಟುನಿಟ್ಟಾದ ಲಾಕ್‌ಡೌನ್‌ ವಿಧಿಸಲಾಗಿತ್ತು.

ಎರಡನೇ ಅಲೆಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸಾವಿರಾರು ಜನರು ಬೆಡ್ ,ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ. ಈಗ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚು ತಗ್ಗಿದೆ, ಆದರೂ ಸಂಪೂರ್ಣ ನಿರ್ಲಕ್ಷ್ಯ ವಹಿಸದೇ ಕೋವಿಡ್ ಮಾರ್ಗಸೂಚಿ ಪಾಲಿಸುವುದು ಕಡ್ಡಾಯವಾಗಿದೆ. ಕೊರೊನಾ ಎರಡನೇ ಅಲೆಯಲ್ಲಿ ಆಗಿರುವ ಸಾವು-ನೋವು ಪರಿಸ್ಥಿತಿ ಸೇರಿದಂತೆ ಹಲವು ವಿಷಯ ಕುರಿತು ದೇಶದ ಜನತೆಗೆ ಉಪದೇಶ ಮಾಡಲಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು