ಹುಬ್ಬಳ್ಳಿ(07-10-2020): ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ.
ಧಾರವಾಡ ಕಮೀಷನರೇಟ್ನಲ್ಲಿನ ಪೊಲೀಸ್ ಕಮೀಷನರ್ ಆರ್. ದಿಲೀಪ್ ಮತ್ತು ಡಿಸಿಪಿ ಕೃಷ್ಣಕಾಂತ್ ನಡುವೆ ಭಿನ್ನಾಭಿಪ್ರಾಯ ಬಹಿರಂಗವಾಗಿದೆ.
ಕಮೀಷನರ್ ಭೇಟಿಗೆ ಅವಕಾಶ ಕೊಡುತ್ತಿಲ್ಲವೆಂದು ಡಿಸಿಪಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೊಲೀಸ್ ಕಮೀಷನರಿಗೆ ಪತ್ರ ಬರೆದಿರುವ ಡಿಸಿಪಿ, ಪತ್ರದ ಪ್ರತಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕಳುಹಿಸಿದ್ದಾರೆ. ಸೂಕ್ಷ್ಮ ಪ್ರಕರಣದ ತನಿಖೆ ವಿಷಯವಾಗಿ ತಿಳಿಸಬೇಕಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಬೇಕಿದೆ. ಕಚೇರಿಗೆ ಬಂದರೆ ಭೇಟಿಗೆ ಅವಕಾಶ ಸಿಗುತ್ತಿಲ್ಲ. ಫೋನ್ ಕರೆ ಮಾಡಿದ್ರೂ ಪ್ರತಿಕ್ರಿಯಿಸುತ್ತಿಲ್ಲ ಎಂದು ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ಇಬ್ಬರು ಅಧಿಕಾರಿಗಳು ನಿರಾಕರಿಸಿದ್ದಾರೆ.