ವಿಚಾರಣಾಧೀನ‌ ಕೈದಿ ಅನುಮಾನಾಸ್ಪದವಾಗಿ ಸಾವು

culprit
Share on facebook
Share on twitter
Share on linkedin
Share on whatsapp
Share on telegram
Share on email
Share on print

ವಿಜಯಪುರ(06-10-2020): ವಿಚಾರಣಾಧೀನ‌ ಕೈದಿಯೋರ್ವ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಕಳ್ಳತನ ಆರೋಪದಲ್ಲಿ ಜೈಲಿನಲ್ಲಿದ್ದ ವಿಚಾರಣಾಧೀನ‌ ಕೈದಿ ಬಸಪ್ಪ ಸಂಜೀವಪ್ಪ ತಳವಾರ (32) ಮೃತಪಟ್ಟಿದ್ದಾರೆ. 2 ದಿನಗಳ ಹಿಂದೆ ಬಸಪ್ಪನಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಿ ವಿಜಯಪುರ ಜೈಲು ಅಧಿಕಾರಿಗಳು ಬಸಪ್ಪನನ್ನು ಸರಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಮಗನ ಸಾವಿನ ಬಗ್ಗೆ ಬಸಪ್ಪ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದು, ತನಿಖೆಗೆ ಆಗ್ರಹಿಸಿದ್ದಾರೆ. ಆಸ್ಪತ್ರೆಗೆ ಗಾಂಧಿಚೌಕ್ ಠಾಣೆ ಪೊಲೀಸರು ತೆರಳಿದ್ದು, ಪರಿಶೀಲನೆಯನ್ನು ನಡೆಸಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು