ಜನಾದೇಶಕ್ಕೆ ದ್ರೋಹ ಬಗೆದು ಅನೈತಿಕವಾಗಿ ಅಧಿಕಾರಕ್ಕೆ ಬಂದ ಸರ್ಕಾರ: ರಾಜ್ಯ ಸರ್ಕಾರ ವಿರುದ್ಧ ರಣದೀಪ್ ಸಿಂಗ್ ಆರೋಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಳಗಾವಿ: ಸಂಪುಟದ ಹಿರಿಯ ಸಚಿವರು ಮುಖ್ಯಮಂತ್ರಿಗಳ ವಿರುದ್ಧವೇ ರಾಜ್ಯಪಾಲರಿಗೆ ದೂರು ನೀಡಿದ ದೇಶದ ಮೊದಲ ಘಟನೆ ರಾಜ್ಯದಲ್ಲಿ ನಡೆದಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರೇಜ್ ವಾಲಾ ಟೀಕಿಸಿದ್ದಾರೆ.

ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯ ಬಿಜೆಪಿ ಸರ್ಕಾರದ ಆಡಳಿತದ ವಿರುದ್ಧ ಆರೋಪಿಸಿದರು.

ಸಂಪುಟದ ಹಿರಿಯ ಸಚಿವರು ರಾಜ್ಯಪಾಲರಿಗೆ ದೂರು ನೀಡಿದ್ದು ತಪ್ಪು ಎಂದಾದರೆ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕಿತ್ತು, ಇಲ್ಲವೇ ದೂರು ಸರಿ ಇದೆ ಎಂದಾಗಿದ್ದರೆ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ನೀಡಬೇಕಿತ್ತಲ್ಲವೇ? ಎಂದು ಪ್ರಶ್ನಿಸಿದರು.

“ಇಡೀ ದೇಶದಲ್ಲಿಯೇ ಭ್ರಷ್ಟಾಚಾರದಲ್ಲಿ ಮುಳುಗಿದ, ದುರಾಡಳಿತ ನೀಡುತ್ತಿರುವ ಕೆಟ್ಟ ಸರ್ಕಾರಗಳ ಪಟ್ಟಿ ಮಾಡಿದರೆ ರಾಜ್ಯ ಬಿಜೆಪಿ ಸರ್ಕಾರವೇ ಮೊದಲ ಸ್ಥಾನದಲ್ಲಿರುತ್ತದೆ. ಏಕೆಂದರೆ ಇದು ಜನಾದೇಶದಿಂದ ಚುನಾಯಿತವಾಗಿಲ್ಲ, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ, ಜನಾದೇಶಕ್ಕೆ ದ್ರೋಹ ಬಗೆದು ಅನೈತಿಕವಾಗಿ ಅಧಿಕಾರಕ್ಕೆ ಬಂದ ಸರ್ಕಾರ”, ಇದು ಸರ್ಕಾರವೋ ಅಥವಾ ಸರ್ಕಸ್ ಎಂಬುದು ಅರ್ಥವಾಗುತ್ತಿಲ್ಲ ರಣದೀಪ್ ಸಿಂಗ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು