ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಜಾತಿವಾರು ಸಮೀಕ್ಷೆಗೆ ನನ್ನ ವಿರೋಧವಿಲ್ಲ : ವಿಪಕ್ಷ ನಾಯಕ ಸಿದ್ದರಾಮಯ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಲ್ಬುರ್ಗಿ: ಕರ್ನಾಟಕ ಹಿಂದುಳಿದ ಜಾತಿಗಳ ಶಾಶ್ವತ ಆಯೋಗ ನಡೆಸಿರುವುದು ಜಾತಿ ಸಮೀಕ್ಷೆ ಅಲ್ಲ, ಜಾತಿಯೂ ಸೇರಿದಂತೆ ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ. ದುರುದ್ದೇಶದಿಂದ ಈ ಸಮೀಕ್ಷೆಯನ್ನು ಜಾತಿಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಸಮೀಕ್ಷೆಯಲ್ಲಿ ಯಾವುದೇ ಪಕ್ಷಪಾತ, ಪೂರ್ವಗ್ರಹಗಳಿಲ್ಲ. ಸಮೀಕ್ಷೆ ನಡೆಸಿದ ಶಿಕ್ಷಕರಲ್ಲಿ ಎಲ್ಲಾ ಜಾತಿ, ಸಮುದಾಯ, ಧರ್ಮಕ್ಕೆ ಸೇರಿದವರು ಇದ್ದಾರೆ. ಇದು ಯಾವ ಜಾತಿಯ ವಿರುದ್ಧವೂ ಅಲ್ಲ, ಯಾವ ಜಾತಿಯ ಪರವಾಗಿಯೂ ಅಲ್ಲ. ಸಾಮಾಜಿಕ ನ್ಯಾಯದ ಪರವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಕುರಿತು ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಮೀಕ್ಷೆಯ ವರದಿ ಜಾರಿಗೆ ಆಗ್ರಹಿಸಿ ಕಲಬುರಗಿಯಲ್ಲಿ ನಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದರು.

55 ಮಾನದಂಡಗಳನ್ನು ಆಧಾರವಾಗಿ ಇಟ್ಟುಕೊಂಡು ವರದಿ ತಯಾರಿಸಲಾಗಿದೆ. ಇಷ್ಟೊಂದು ಸಮರ್ಪಕವಾಗಿ ಎಲ್ಲಾ ಜಾತಿಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಯ ಬಗ್ಗೆ ಸಮೀಕ್ಷೆ ನಡೆಸಿರುವುದು ದೇಶದಲ್ಲಿ ನಮ್ಮಲ್ಲೇ ಪ್ರಥಮ. ಪ್ರತಿ ಜಾತಿಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸಿ, ಜಾರಿಗೊಳಿಸಲು ಈ ವರದಿಯಿಂದ ಅನುಕೂಲವಾಗುತ್ತದೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮುಖ್ಯ ಉದ್ದೇಶವೂ ಇದೆ ಆಗಿದೆ ಎಂದಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ವರದಿ ಸ್ವೀಕರಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿದ್ದ ಪುಟ್ಟರಂಗ ಶೆಟ್ಟಿ ಅವರಿಗೆ ಹೇಳಿದ್ದೆ. ಅದಕ್ಕವರು ಒಪ್ಪಿ ಸಭೆ ಕರೆದದ್ದು ಗೊತ್ತಾಗಿ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕ್ತೀನಿ ಎಂದು ಬೆದರಿಸಿದವರು ಎಚ್.ಡಿ.ಕುಮಾರಸ್ವಾಮಿ. ಸಿದ್ದರಾಮಯ್ಯನವರು ಸದನದಲ್ಲಿ ಈ ವಿಚಾರವನ್ನು ಯಾಕೆ ಪ್ರಸ್ತಾಪಿಸುತ್ತಿಲ್ಲ ಎಂದು ಕುಮಾರ ಸ್ವಾಮಿಯವರು ಪ್ರಶ್ನೆ ಮಾಡುತ್ತಾರೆ. ಮುಂದಿನ ಡಿಸೆಂಬರ್ ವಿಧಾನಮಂಡಲದ ಅಧಿವೇಶನದಲ್ಲಿ ಈ ವಿಚಾರದ ಬಗ್ಗೆ ಮಾತನಾಡುತ್ತೇನೆ. ಅಲ್ಲಿಯೇ ಅವರು ನಿಲುವು ಸ್ಪಷ್ಟಪಡಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ವರದಿ ಸೋರಿಕೆಯಾಗಿದೆ, ವರದಿಯಲ್ಲಿ ಒಂದಷ್ಟು ಜಾತಿಗಳಿಗೆ ಅನ್ಯಾಯವಾಗಿದೆ ಹೀಗೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯ ಬಗ್ಗೆ ಬರೀ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ವರದಿ ಸೋರಿಕೆಯಾಗಿದ್ದರೆ ಅದರ ಮಾಹಿತಿ ತೋರಿಸಲಿ ನೋಡೋಣ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಏಕೆ ವರದಿ ಸ್ವೀಕರಿಸಿಲ್ಲ ಎಂದು ಪ್ರಶ್ನಿಸುತ್ತಿರುವ ಕೆ.ಎಸ್. ಈಶ್ವರಪ್ಪ ಅವರಿಗಿಂತ ದೊಡ್ಡ ಪೆದ್ದ ಯಾರಿದ್ದಾರೆ? ನಮ್ಮ ಸರ್ಕಾರವೇ ನಡೆಸಿದ್ದ ಸಮೀಕ್ಷೆ ನಮ್ಮ ಅಧಿಕಾರಾವಧಿಯಲ್ಲಿ ಪೂರ್ಣಗೊಂಡಿದ್ದರೆ ನಾವು ವರದಿ ಸ್ವೀಕರಿಸುತ್ತಿರಲಿಲ್ಲವೇ? ಎಂದು ಸಿದ್ದರಾಮಯ್ಯ ಕೆ.ಎಸ್.ಈಶ್ವರಪ್ಪ ವಿರುದ್ಧ ಗುಡುಗಿದ್ದಾರೆ

ಜಾತಿ ಪ್ರಮಾಣ ಪತ್ರ ಪಡೆಯಲು ಸಿ.ಆರ್.ಐ ಸೆಲ್ ನ ವರದಿ ಪಡೆಯಬೇಕೆಂದು ನಿಯಮ ಬದಲಾವಣೆ ಮಾಡಿರುವುದು ಸರಿಯಲ್ಲ. ಇದರಿಂದ ಶೋಷಿತರು ಇನ್ನಷ್ಟು ಶೋಷಣೆಗೆ ಒಳಗಾಗಲಿದ್ದಾರೆ. ಕೂಡಲೇ ಈ ಆದೇಶವನ್ನು ವಾಪಾಸು ಪಡೆಯಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು