ಜೆಡಿಎಸ್ ಪಕ್ಷವನ್ನು ಟೀಕಿಸದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ : ಎಚ್.ಡಿ.ಕೆ ಆಕ್ರೋಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ‘ಸಿದ್ಧಹಸ್ತರು’ ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ನವರ ಇಂಥ ಹೇಳಿಕೆ ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.

ಈಗ ಎಂಸಿ ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ‘ಸಿದ್ದಕಲೆ’ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ ಎಂದು ಎಚ್ ಡಿಕೆ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣತ್ತೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಗುಡುಗಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು