J D U ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧಾರ.

Share on facebook
Share on twitter
Share on linkedin
Share on whatsapp
Share on telegram
Share on email
Share on print

ಪಟ್ನಾ: ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನನ್ನು ಮಿತ್ರಪಕ್ಷವೆಂದು ಪರಿಗಣಿಸದಿರುವ ಹಿನ್ನೆಲೆಯಲ್ಲಿ ಜೆಡಿಯು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಬಿಹಾರದ ಆಡಳಿರೂಢ ಎನ್ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಹಾಗೂ ಜೆಡಿಯು ಪಾಲುದಾರ ಪಕ್ಷಗಳಾಗಿವೆ.

ಲಕ್ನೋದಲ್ಲಿ ಜನವರಿ 18ರಂದು ತನ್ನ ಪಕ್ಷದ ಹಿರಿಯ ನಾಯಕರ ಸಭೆ ನಡೆಯಲಿದ್ದು, ಆ ದಿನವೇ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜೆಡಿಯು ಉತ್ತರಪ್ರದೇಶ ಘಟಕದ ಅಧ್ಯಕ್ಷ ಅನೂಪ್ ಸಿಂಗ್ ಪಟೇಲ್ ಶನಿವಾರ ತಿಳಿಸಿದ್ದಾರೆ.

ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಸಂದರ್ಭ ಉತ್ತರಪ್ರದೇಶದಲ್ಲಿ ಜೆಡಿಯು ಪಕ್ಷವನ್ನು ಮಿತ್ರಪಕ್ಷವೆಂದು ಹೆಸರಿಸಿಲ್ಲವಾದ್ದರಿಂದ ಅದು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಪಟೇಲ್ ತಿಳಿಸಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು