ರಾಂಚಿ(10-12-2020): ಜಾರ್ಖಾಂಡ್ ನಲ್ಲಿ ಪೈಶಾಚಿಕ ಕೃತ್ಯವೊಂದು ವರದಿಯಾಗಿದ್ದು, 35 ವರ್ಷದ ಮಹಿಳೆ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಮುಫಸ್ಸಿಲ್ ನ ಡಿಐಜಿ ಸುದರ್ಶನ್ ಮಂಡಲ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಮಹಿಳೆಯೋರ್ವಳು ಮಾರ್ಕೆಟ್ ನಿಂದ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ದುಷ್ಕೃತ್ಯ ನಡೆದಿದೆ ಎಂದು ಹೇಳಿದ್ದಾರೆ.
ಸಂತ್ರಸ್ತೆ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ತನಿಖೆಯನ್ನು ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.