ಕೆಸರಿನಿಂದ ತುಂಬಿದ ಜನ್ನಘಟಾ ಗ್ರಾಮದ ರಸ್ತೆ| ಅಧಿಕಾರಿಗಳ ನಿರ್ಲಕ್ಷ್ಯ, ಗ್ರಾಮಸ್ಥರ ಆಕ್ರೋಶ

Jnanaghata village
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೋಲಾರ(28-10-2020): ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಜನ್ನಘಟಾ ಗ್ರಾಮದ ರಸ್ತೆ ಪರಿಸ್ಥಿತಿ ಹದಗೆಟ್ಟಿದ್ದು, ಅಧಿಕಾರಿಗಳು ನಿರ್ಲಕ್ಷ್ಯವನ್ನು ಮಾಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

2018-19ರಲ್ಲಿ ಈ ಕುರಿತು ಜನ್ನಘಟಾ ಗ್ರಾಮ ಪಂಚಾಯತ್ ಗೆ ರಸ್ತೆ ದುರಸ್ಥಿ ಮಾಡುವಂತೆ ಸ್ಥಳೀಯರು ಹಲವು ಬಾರಿ ಮನವಿಯನ್ನು ಮಾಡಿದ್ದಾರೆ. ಆದರೆ ಪಂಚಾಯತ್ ಅಧಿಕಾರಿಗಳು ಮಾತ್ರ ಭರವಸೆ ನೀಡಿ ನುಣುಚಿಕೊಂಡಿದ್ದು, ಗ್ರಾಮಸ್ಥರು ಸಮಸ್ಯೆಯನ್ನು ಎದುರಿಸುವಂತಾಗಿದೆ.

ಈ ಗ್ರಾಮದ ರಸ್ತೆಯಲ್ಲಿ ಮಳೆ ಎಂದರೆ ಜನರು ಹೊರಗೆ ಬರದಂತಾಗಿದೆ. ಶಾಲಾ-ಕಾಲೇಜುಗಳಿಗೂ ತೆರಳದಂತಾಗಿದೆ. ಗ್ರಾಮದ ಸಂಪರ್ಕ ರಸ್ತೆ ಕೆಸರಿನಿಂದ ತುಂಬಿಕೊಂಡಿದ್ದು, ಜನರ ಸಂಚಾರಕ್ಕೆ ಅಡ್ಡಿಯಾಗಿದೆ. ಗ್ರಾಮದಲ್ಲಿ ಸಾವು ಸಂಭವಿಸಿದ್ದು, ಮೃತದೇಹವನ್ನು ಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಎಂದು ವಿಡಿಯೋದಲ್ಲಿ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು