ನವದೆಹಲಿ(08-10-2020): ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಖಾಲಿ ಇರುವಂತಹ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ವಿವಿಧ ಹುದ್ದೆಗಳಾದ ಶೀಟ್ ಮೆಟಲ್ ವರ್ಕರ್, ವೆಲ್ಡರ್ ಫಿಟ್ಟರ್, ಮೆಕ್ಯಾನಿಕ್ ಡೀಸೆಲ್, ಮೆಕ್ಯಾನಿಕ್ ಮೋಟಾರು ವಾಹನ, ಡಿಸೈನರ್, ಎಲೆಕ್ಟ್ರಿಶಿಯನ್ ಹಾಗೂ ಕ್ರೇನ್ ಆಪರೇಟರ್ ಸೇರಿದಂತೆ ಅನೇಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
30 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿದಾರರು 10ನೇ ತರಗತಿ ಉತ್ತೀರ್ಣರಾಗಿರಬೇಕು.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು cochinshipyard.com ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅ.10ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಸಾಮಾನ್ಯ ಮತ್ತು ಒಬಿಸಿ ವಿಭಾಗದ ಅಭ್ಯರ್ಥಿಗಳು 300 ರೂ. ಹಾಗೂ ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳ ಅರ್ಜಿ ಶುಲ್ಕ 200 ರೂಪಾಯಿ ಪಾವತಿ ಮಾಡಿ ಅರ್ಜಿ ಸಲ್ಲಿಕೆ ಮಾಡಬೇಕು.