ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ: ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ  

jobse
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮೈಸೂರು (20-11-2020): ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಶುಭಸುದ್ದಿ ಇದಾಗಿದ್ದು, ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್‍ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಪದವಿ ಹೊಂದಿರುವ ಅಥವಾ ಅಂತಿಮ ವರ್ಷದ ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಎಸ್ಸಿ-ಎಸ್ಟಿಅಭ್ಯರ್ಥಿಗಳು 21 ರಿಂದ 30 ವರ್ಷದೊಳಗಿನವರಾಗಿದ್ದು, ಇವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಓ.ಬಿ.ಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲತೆ (ಪಿ.ಡಬ್ಲ್ಯೂಡಿ-ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ) ಅಭ್ಯರ್ಥಿಗಳಿಗೆ 15 ವರ್ಷಗಳು, ಅಂಗವಿಲಕತೆ (ಪಿ.ಡಬ್ಲ್ಯೂಡಿ-ಓಬಿ.ಸಿ) 13 ವರ್ಷಗಳು, ಪಿಡಬ್ಲ್ಯೂಡಿ (ಸಾಮಾನ್ಯ ವರ್ಗ/ಏಕ್ನಾಮಿಕಲ್ ವಿಕ್ ಸೆಕ್ಷನ್ (ಇ.ಡಬ್ಲ್ಯೂಎಸ್) 10 ವರ್ಷಗಳು, ಮಾಜಿ ಸೈನಿಕರುಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಆಸಕ್ತರು ಡಿಸೆಂಬರ್ 4ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ಇವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ 0821-2489972 ಕ್ಕೆ ಸಂಪರ್ಕಿಸಬಹುದು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು