ತುಮಕೂರು : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಸಿದ್ಧಗಂಗಾ ಮಠದ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಮಾತನಾಡಿದ ಅವರು “ಕೊರೋನಾ ಎರಡನೇ ಅಲೆ ಶುರುವಾಗಿದೆ.ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ರಾಜ್ಯದ ಜನರು ಕಡ್ಡಾಯವಾಗಿ ಪಾಲಿಸೋ ಅಗತ್ಯವಿದೆ. ಇದರ ಮಧ್ಯೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ, ಯಾವುದೇ ತೊಂದರೆ ಆಗದಂತೆ ಜುಲೈ 15, 2021ರಿಂದ ಮುಂದಿನ ಶೈಕ್ಷಣಿಕ ವರ್ಷವನ್ನು ಆರಂಭಿಸುವ ಚಿಂತನೆ ನಡೆಸಲಾಗಿದೆ “ಎಂದರು.