ಜೂನ್ 14ಕ್ಕೂ ಮೊದಲೇ ‘ಲಾಕ್ ಡೌನ್ ‘ ತೆರವು? ‘ಅನ್ ಲಾಕ್’ ಸುಳಿವು ನೀಡಿದ ಸಿಎಂ ಯಡಿಯೂರಪ್ಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜಾರಿಯಲ್ಲಿರುವ ‘ಲಾಕ್ ಡೌನ್ ‘ ತೆರವಿಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಜೂನ್ 14ಕ್ಕೂ ಮೊದಲೇ ‘ಅನ್ ಲಾಕ್’ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ ಎಂದಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು ಮಾಡಲು ಚಿಂತನೆ ನಡೆಸಲಾಗಿದೆ. ಪಾಸಿಟಿವಿಟಿ ರೇಟ್ ಶೇ.5 ಕ್ಕಿಂತ ಕಡಿಮೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚಿಸಿ ನಾಲ್ಕೈದು ದಿನಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಅತೀ ಕಡಿಮೆ ಪಾಸಿಟಿವಿಟಿ ರೇಟ್ ಹೊಂದಿರುವ ಜಿಲ್ಲೆಗಳೆಂದರೆ ಬೀದರ್ – 0.85%,ಕಲಬುರಗಿ – 3.50%, ಹಾವೇರಿ – 5.52%ಯಾದಗಿರಿ – 5.60%, ಬೆಂಗಳೂರು ನಗರ – 6.23%, ರಾಮನಗರ – 7.34% ಈ ಜಿಲ್ಲೆಯಲ್ಲಿ ಅನ್ ಲಾಕ್ ಮಾಡಬೇಕಾ ಎನ್ನುವ ಚರ್ಚೆ ನಡೆದಿದೆ. ಹಾಗೆಯೇ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜೂನ್ 14ರ ಮೊದಲೇ ಬೆಂಗಳೂರಿನಲ್ಲಿ ಲಾಕ್ ಡೌನ್ ಸಡಿಲಿಸುವ ಸಾಧ್ಯತೆ ಕೂಡ ದಟ್ಟವಾಗಿದೆ, ಜೂನ್ 14ರ ಮೊದಲೇ ಹಂತಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಆರಂಭಿಸುವ ಬಗ್ಗೆ ಸಿಎಂ ಒಲವು ತೋರಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು