ಉಡುಪಿ ಜಿಲ್ಲಾ ನೂತನ ಖಾಝಿಯಾಗಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಅಧಿಕಾರ ಸ್ವೀಕಾರ

khazi
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಾಪು(10/10/2020): ಹಿರಿಯ ವಿದ್ವಾಂಸ,  ಕರ್ನಾಟಕ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಅವರು ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್‌ನ ನೂತನ ಖಾಝಿಯಾಗಿ ಶನಿವಾರ ಅಧಿಕಾರ ಸ್ವೀಕರಿಸಿದರು.

ಉಡುಪಿ ಜಿಲ್ಲಾ ಸಂಯುಕ್ತ ಖಾಝಿಯಾಗಿದ್ದ ಬಹು ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ಅಗಲಿಕೆಯಿಂದ ತೆರವುಗೊಂಡಿತ್ತು. ಇಂದು ಮೂಳೂರಿನ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ಖಾಝಿ ಸ್ವೀಕಾರ ಸಮಾರಂಭ ಹಾಗೂ ತಾಜುಲ್ ಪುಖಹಾಅ್ ಬೇಕಲ್ ಉಸ್ತಾದ್ ಅನುಸ್ಮರಣಾ ಮಜ್ಲಿಸ್ ಸಭೆಯಲ್ಲಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ನೂತನ ಖಾಝಿಯಾಗಿ ಅಧಿಕಾರ ಸ್ವೀಕರಿಸಿದರು.

ಸೈಯದ್ ಮುಖ್ತಾರ್ ತಂಙಳ್ ನೇತೃತ್ವದಲ್ಲಿ ಬೇಕಲ್ ಉಸ್ತಾದ್ ಅನುಸ್ಮರಣೆ ಕಾರ್ಯಕ್ರಮ ನಡೆಯಿತು. ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಆಫ್ ಇಂಡಿಯಾದ ಅಧ್ಯಾಪಕರ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಕಾರ್ಯಕ್ರಮ ಉದ್ಘಾಟಿಸಿದರು.

ಕರ್ನಾಟಕ ಉಲಮಾ ಒಕ್ಕೂಟದ ಕೋಶಾಧಿಕಾರಿ, ಕೊಡಗು ಜಿಲ್ಲಾ ಸಹಾಯಕ ಖಾಝಿ ಎಡಪ್ಪಾಲಿ ಮಹ್ಮೂದ್ ಮುಸ್ಲಿಯಾರ್ ಅವರು ಖಾಝಿ ಪದಗ್ರಹಣ ನೇತೃತ್ವ ವಹಿಸಿದ್ದರು. ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ. ಅಬೂಬಕರ್ ನೇಜಾರ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಉಲಮಾ ಒಕ್ಕೂಟದ ಉಪಾಧ್ಯಕ್ಷ ಕೆ.ಪಿ.ಹುಸೈನ್ ಸಅದಿ ಕೆ.ಸಿ. ರೋಡ್ ಮುಖ್ಯ ಭಾಷಣ ಮಾಡಿದರು.

ಕರ್ನಾಟಕ ಸುನ್ನೀ ಕೋ ಆರ್ಡಿನೇಶನ್ ಅಧ್ಯಕ್ಷ ಎಸ್.ಪಿ. ಹಂಝ ಸಖಾಫಿ ಬಂಟ್ವಾಳ, ಕಾರ್ಯದರ್ಶಿ ಪಿ.ಪಿ. ಅಹ್ಮದ್ ಸಖಾಫಿ ಕಾಶಿಪಟ್ನ, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರ.ಕಾರ್ಯದರ್ಶಿ ಎನ್.ಕೆ.ಎಂ. ಶಾಫಿ ಸಅದಿ ಬೆಂಗಳೂರು, ಎಸ್‌ವೈಎಸ್ ರಾಜ್ಯಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಸ್ಸೈಯದ್ ಉಮರ್ ಅಸ್ಸಖಾಫ್ ಮದನಿ ತಂಙಳ್, ಎಸ್‌ಎಂಎ ರಾಜ್ಯಾಧ್ಯಕ್ಷ ಅಸ್ಸೈಯದ್ ಜಲಾಲುದ್ದೀನ್ ಅಲ್‌ಹಾದಿ ತಂಙಳ್ ಮಲ್ಜಅ್, ಎಸ್‌ಜೆಎಂ ರಾಜ್ಯಾಧ್ಯಕ್ಷ ಆತೂರು ಸಅದ್ ಮುಸ್ಲಿಯಾರ್, ಎಸ್‌ಇಡಿಸಿ ರಾಜ್ಯಾಧ್ಯಕ್ಷ ಕೆ.ಕೆ.ಎಂ.ಮುಹಿಯುದ್ದೀನ್ ಕಾಮಿಲ್ ಸಖಾಫಿ, ಕೆಸಿಎಫ್ ಐಎನ್‌ಸಿ ಅಧ್ಯಕ್ಷ ಹಾಜಿ ಶೈಖ್ ಬಾವ, ಡಿಕೆಎಸ್‌ಸಿ ನಾಯಕರಾದ ಹಾಜಿ ಇಸ್ಮಾಯೀಲ್ ಕಿನ್ಯ, ಎಸ್‌ಡಿಐ ರಾಜ್ಯ ಮುಬಲ್ಲಿಗ್ ಮೌಲಾನ ಸಾದಿಕುಲ್ಲಾ ರಝ್ವಿ, ಬೇಕಲ್ ಉಸ್ತಾದರ ಪುತ್ರ ಅಬ್ದುಲ್ ಜಲೀಲ್ ಮೋಂಟುಗೋಳಿ ಮತ್ತಿತರರು ಭಾಗವಹಿಸಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು