ಮಂಗಳೂರು(28-01-2021): ಉಳ್ಳಾಲದ ಜನರಿಗೆ ತಾಕತ್ತಿದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ ಎಂದು ಆರ್ ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಭಟ್, ಪಾಕಿಸ್ತಾನದಲ್ಲಿ ಮುಸ್ಲಿಮರೇ ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಇದೇ ಸ್ಥಿತಿ ಉಳ್ಳಾಲದಲ್ಲಿ ಇದೆ ಎಂದು ಹೇಳಿದ್ದಾರೆ.
ಉಳ್ಳಾಲದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನ ಮತ್ತು ದೈವಸ್ಥಾನಗಳ ಹುಂಡಿಗೆ ಬೇಡದ ವಸ್ತುಗಳನ್ನು ಹಾಕುತ್ತಿದ್ದು ಇದರಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತ ಕೆಸಲವಾಗಿದೆ. ಇದರಿಂದಾಗಿ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ.
ಈ ಮೊದಲು ಭಾರತದ ಭೂಭಾಗ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿ ಕಲ್ಲಡ್ಕ ಪ್ರಭಾಕರ್ ಭಟ್ ಹೋಲಿಕೆ ಮಾಡಿ ವಿವಾದವನ್ನು ಸೃಷ್ಟಿಸಿದ್ದರು. ಇದೀಗ ಮತ್ತೆ ಅಂತದ್ದೇ ಚಾಲಿಯನ್ನು ಮುಂದುವರಿಸಿದ್ದಾರೆ.