ಕಮಲಾಪೂರ(15-10-2020): ತಾಲೂಕಿನ ಕುದಮೂಡ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ತಹಶಿಲ್ದಾರ ಅಂಜುಮ್ ತಬಸುಮ್ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.
ಭಾರೀ ಮಳೆಗೆ ಮನೆಯೊಳಗಡೆ ನೀರು ಹರಿದು ಮನೆಯಲ್ಲಿದ್ದ ದವಸ ಧಾನ್ಯಗಳು ನೀರುಪಾಲಾಗಿವೆ. ಕುದಮೂಡ ಗ್ರಾಮದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಈ ಬಗ್ಗೆ ತಹಶಿಲ್ದಾರ ಅಂಜುಮ್ ತಬಸುಮ್ ಕಮಲಾಪೂರ ರವರ ಗಮನಕ್ಕೆ ತಂದಾಗ ತಕ್ಷಣ ಸ್ಪಂದಿಸಿದ್ದಾರೆ ಎಂದು ಕಲಬುರ್ಗಿ ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷರು ಮಲ್ಲಿಕಾರ್ಜುನ ತಳಕೇರಿ ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗಿದ್ದು, ತಗ್ಗುಪ್ರದೇಶಗಳಿಗೆ ನೀರು ತುಂಬಿದೆ. ಇಂದು ಕೂಡ ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ.