ಗುಂಡ್ಲುಪೇಟೆ(06-10-2020): ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳನ್ನು ಕನಕ ಭವನದ ಒಳಗಡೆ ತೆರಳದಂತೆ ತಡೆದಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದ್ದು ವಿವಾದಕ್ಕೆ ಕಾರಣವಾಗಿದೆ.
ವಿದ್ಯಾಗಮ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ ಆಚರಣೆ ನಡೆದಿದೆ ಎನ್ನಲಾದ ಪ್ರಕರಣ ಸಂಬಂಧ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಾಟಿ ಗ್ರಾಮಕ್ಕೆ ಭೇಟಿ ನೀಡಿ ಶಾಲಾ ಮಕ್ಕಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.
ಅ.3ರಂದು ಗ್ರಾಮದ ಸಮುದಾಯದ ಕಲಿಕಾ ಕೇಂದ್ರದಲ್ಲಿ ಅಭ್ಯಾಸ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು, ಶಿಕ್ಷಕರು ಬಂದಿಲ್ಲ ಎಂಬ ಕಾರಣಕ್ಕೆ ಅದೇ ಗ್ರಾಮದ ಕನಕಭವನದಲ್ಲಿ ನಡೆಯುತ್ತಿರುವ ವಿದ್ಯಾಗಮ ಕಾರ್ಯಕ್ರಮದಲ್ಲಿ ಶಿಕ್ಷಕರಿದ್ದಾರೆ ಎಂದು ಅಲ್ಲಿಗೆ ತೆರಳಿದ್ದರು.
ಈ ವೇಳೆ ವ್ಯಕ್ತಿಯೊಬ್ಬರು, ಭವನದ ಒಳಗಡೆ ಹೋಗಬೇಡಿ, ಮೆಟ್ಟಿಲುಗಳ ಬಳಿ ಕುಳಿತುಕೊಳ್ಳಿ. ಒಳಗೆ ಹೋದರೆ ಜಾಡಿಸಿ ಒದೆಯುತ್ತೇನೆ ಎಂದು ಹೆದರಿಸಿದ್ದಾರೆ. ನಂತರ ನಾವು ಅಲ್ಲಿಂದ ಹೊರಟು ಬಂದೆವು ಎಂದು ವಿದ್ಯಾರ್ಥಿಗಳು ಅಧಿಕಾರಿಗಳಿಗೆ ತಿಳಿಸಿದ್ದಾರೆ.