ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ: ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಧ್ವಜಾರೋಹಣ ನಡೆಸಿದ 10ಕ್ಕೂ ಅಧಿಕ ಮಂದಿಯ ಬಂಧನ

kalyan karnataka
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಲಬುರಗಿ(01-11-2020): ಇಂದು ಕನ್ನಡ ರಾಜ್ಯೋತ್ಸವವಾಗಿದ್ದು, ರಾಜ್ಯದಲ್ಲಿ ಸಡಗರದಿಂದ ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿ, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಬಿಎಸ್ ವೈ ಸೇರಿದಂತೆ ಹಲವು ಗಣ್ಯರು ರಾಜ್ಯೋತ್ಸವದ ಶುಭಾಶಯವನ್ನು ಕೋರಿದ್ದಾರೆ.

ಇನ್ನು ಕನ್ನಡ ರಾಜ್ಯೋತ್ಸವದ ದಿನದಂದೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಧ್ವಜರೋಹಣಕ್ಕೆ ಯತ್ನಿಸಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ 10ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.

ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟ ಸಮಿತಿಯಿಯಿಂದ ಪ್ರತಿಭಟನೆ ನಡೆಸಲಾಗಿದೆ. ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಬೋಳ್ ಮಾತನಾಡಿ, ಕಲ್ಯಾಣ ಕರ್ನಾಟಕದ ಹೆಸರಿನಿಂದ ಅಭಿವೃದ್ಧಿ ಆಗಲ್ಲ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದಿಂದ ಮಾತ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಎಂದು ಹೇಳಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು