ಬೆಂಗಳೂರು(09/10/2020): ಸದಾ ಒಂದಲ್ಲ ಒಂದು ಕಾರಣಕ್ಕೆ ವಿವಾದದಲ್ಲೇ ಸುದ್ದಿಯಾಗುವ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ತುಮಕೂರು ಜೆಎಂಎಫ್ಸಿ ನ್ಯಾಯಾಲಯ ಪೊಲೀಸರಿಗೆ ನಿರ್ದೇಶಿಸಿದೆ.
ವಿವಾದಿತ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ನಟಿ ಕಂಗನಾ ರಾಣಾವತ್ ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದರು.
ಕಂಗನಾ ವಿರುದ್ಧ ಪೊಲೀಸರು ಯಾವುದೇ ಕ್ರಮವನ್ನು ತೆಗೆದುಕೊಳ್ಳದ ಹಿನ್ನೆಲೆ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ರಮೇಶ್ ನಾಯಕ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ವಿನೋದ್ ಬಾಲನಾಯಕ್ ಕ್ಯಾತ್ಸಂದ್ರ ಪೊಲೀಸರಿಗೆ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡಿದ್ದಾರೆ.